ಬೆಂಗಳೂರು : ಜುಲೈ 26 ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಲಸಿಕಾ ಕಾರ್ಯಕ್ರಮಗಳು ವೇಗವಾಗಿ ಸಾಗುತ್ತಿದೆ. ಇವರುಗಳ ಜೊತೆಗೆ ಬೋಧಕರು, ಬೋಧಕೇತರ ಸಿಬ್ಬಂದಿಗಳಿಗೂ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.
ಭೌತಿಕ ತರಗತಿಗಳಿಗೆ ಹಾಜರಾಗ ಇಚ್ಛಿಸುವ ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಕಡ್ಡಾಯವಾಗಿ ಪಡೆದಿರಲೇಬೇಕು ಎಂದರು.
Advertisement. Scroll to continue reading.