ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಹಾಗೂ ಜೆಪಿನಡ್ಡಾ ನನ್ನ ಬಗ್ಗೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿ ಪಕ್ಷದಲ್ಲಿ ಅಧಿಕಾರ ನೀಡಿಲ್ಲ. ಜುಲೈ 26ಕ್ಕೆ ನನ್ನ ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ಕೇಂದ್ರದ ನಾಯಕರು ನೀಡಿವ ಸೂಚನೆಯನ್ನೂ ಪಾಲಿಸಲು ಸಿದ್ದ ಎಂದು ಸಿ ಎಂ ಯಡಿಯೂರಪ್ಪ ಹೇಳಿದ್ದಾರೆ.
ಜುಲೈ.26ರಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿದ ಸಂದರ್ಭದಲ್ಲಿಯೇ, ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆಯನ್ನು ನೀಡುವ ಸುಳಿವು ನೀಡಿದ್ದಾರೆ.
ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗೆ ಯಾರೂ ಮುಂದಾಗಬಾರದು, ಅಭಿಮಾನ ಶಿಸ್ತಿನ ಮಿತಿ ಮೀರಬಾರದು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ. ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತೇನೆ. ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ವಿವಿಧ ಮಠಾಧೀಶರು ತೋರಿಸಿದ ವಿಶೇಷ ಕಾಳಜಿಗೆ ಧನ್ಯವಾದಗಳು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟ ಪಕ್ಷವನ್ನಾಗಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮೂಲಕವೂ ಮನವಿ ಮಾಡಿದ್ದು, ಇದು ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡುವುದು ಬಹುತೇಕ ಖಚಿತ ಎಂಬುದನ್ನು ಬಿಂಬಿಸುತ್ತಿದೆ.
Advertisement. Scroll to continue reading.