ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಪಟ್ಟ ಸಿಕ್ಕಿದೆ. ಲಿಂಗಾಯಿತ ಶಾಸಕರಲ್ಲಿ ಹೆಚ್ಚು ಪ್ರಭಾವಶಾಲಿ ಆಗಿರುವವರು ಬೊಮ್ಮಾಯಿ. ಗೃಹ ಸಚಿವರಾಗಿದ್ದ ಅವರು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲಿದ್ದಾರೆ.
ಕರ್ನಾಟಕದ 11 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಎಸ್.ಆರ್.ಬೊಮ್ಮಾಯಿ ಪುತ್ರರಾಗಿರುವ ಬಸವರಾಜ್ ಬೊಮ್ಮಾಯಿ ಇದೀಗ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 1960, ಜನವರಿ 28 ರಂದು ಜನಿಸಿದ ಅವರು ಇಂಜಿನಿಯರಿಂಗ್ ಪದವೀಧರರು. ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಿಂದ ಎರಡು ಬಾರಿ ಎಂ ಎಲ್ ಸಿ ಹಾಗೂ ಮೂರು ಬಾರಿ ಶಾಸಕರಾಗಿದ್ದರು. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಆಪ್ತರು ಆಗಿದ್ದಾರೆ. ರಾಜ್ಯದ 30 ನೇ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Advertisement. Scroll to continue reading.