ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಹೆಬ್ರಿ – ಉಡುಪಿ ರಾಷ್ಟ್ರೀಯ ಹೆದ್ದಾರಿ ಕೆಳಪೇಟೆಯ ವಾಣಿಜ್ಯ ಸಂಕೀರ್ಣದ ಅಂಗಡಿಯ ಮುಂದೆ ಅಪರಿಚಿತ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಮಾರು ಎಪ್ಪತ್ತು ರಿಂದ ಎಂಬತ್ತರ ಆಸುಪಾಸಿನ ವಯಸ್ಸಿನವರಾಗಿದ್ದು ಹೆಬ್ರಿಯಲ್ಲಿ ಕೆಲವು ದಿನಗಳಿಂದ ಭಿಕ್ಷಾಟನೆ ಮಾಡಿ ತಿರುಗಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ಆಗಮಿಸಿ ಮೃತದೇಹವನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಹೆಬ್ರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ . ದೂರವಾಣಿ ಸಂಖ್ಯೆ 08253251116.
Advertisement. Scroll to continue reading.