ಕಳೆದ ಹಲವು ದಿನಗಳಿಂದ ಕೊಂಚ ವಿರಾಮ ಪಡೆದಿದ್ದ ಮಳೆ ನಿನ್ನೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮುಂದುವರೆಸಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಕೂಡಾ ವ್ಯಾಪಕ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನ ಎಚ್ಚರಿಕೆ ನೀಡಲಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 76 ಮಿ.ಮೀ ಮಳೆಯಾಗಿದ್ದು, ಬೆಂಗಳೂರಿನಲ್ಲಿಯೂ ಕೂಡ ನಿನ್ನೆ ಸಾಧಾರಣ ಮಳೆಯಾಗಿದೆ. ಇನ್ನು ಉಳಿದ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Advertisement. Scroll to continue reading.