ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರು ರಾಜೀನಾಮೆ ನಂತರ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದರು. ತಮ್ಮನ್ನು ಸಿಎಂ ಪಟ್ಟಕ್ಕೆ ಏರಿಸಿದ ಯಡಿಯೂರಪ್ಪ ಅವರಿಗೆ, ಸಂಪುಟ ದರ್ಜೆಯ ಸ್ಥಾನ ನೀಡಿದ್ದಾರೆ.
ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿದ್ದಾರೆ. ಬಿ.ಎಸ್ ಯಡಿಯೂರಪ್ಪ, ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿಗಳು ಇವರಿಗೆ, ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯವನ್ನು ನೀಡುವಂತೆ ಆದೇಶಿಸಿದ್ದಾರೆ.
Advertisement. Scroll to continue reading.