ವರದಿ : ಬಿ.ಎಸ್.ಆಚಾರ್ಯ
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ, ಬೆಂಗಳೂರು ಹಾಗೂ ಜಿಲ್ಲಾ ಆಸ್ಪತ್ರೆ ಉಡುಪಿ ಇದರ ಸಹಯೋಗದೊಂದಿಗೆ 250 ಹಾಸಿಗೆಗಳ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್, ಶಾಸಕ ರಘುಪತಿ ಭಟ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ತ್ರಿಲೋಕಚಂದ್ರ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



