ಉಡುಪಿ : ಜಿಲ್ಲಾ ಪಂಚಾಯತ್ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಮುಖ್ಯಮಂತ್ರಿ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ ಸ್ಥಿತಿ ಗತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಬಗ್ಗೆ ಹಾಗೂ ಆಕ್ಸಿಜನ್ ಲಭ್ಯತೆಯ ಬಗ್ಗೆ ಮಾಹಿತಿ ಪಡೆದು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ತ್ರಿಲೋಕಚಂದ್ರ ಕೆ.ವಿ., ಜಿಲ್ಲಾಧಿಕಾರಿ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

