ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ನಡೆಯಲಿರುವ ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನದಲ್ಲಿ ಭಾಷಣ ಮಾಡುವ ನಿರೀಕ್ಷೆ ಇದೆ. 76ನೇ ಮಹಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವವರ ತಾತ್ಕಾಲಿಕ ಪಟ್ಟಿಯನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮೋದಿ ಅವರ ಹೆಸರೂ ಇದೆ.
ವಿಶ್ವದಾದ್ಯಂತ ಕೊರೊನಾ ರೂಪಾಂತರ ಹೆಚ್ಚುತ್ತಿರುವುದರಿಂದ ಮಹಾಧಿವೇಶನದ ವೇಳಾಪಟ್ಟಿಯಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಒಂದು ವೇಳೆ ವೇಳಾಪಟ್ಟಿಯಲ್ಲಿ ಬದಲಾವಣೆಯಾಗದಿದ್ದರೆ, ಮೋದಿ ಸೆ.25ರಂದು ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ.
Advertisement. Scroll to continue reading.