ಹಿರಿಯಡಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜಾರಗುತ್ತುವಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯೊತ್ಸವದ ಪ್ರಯುಕ್ತ ಮಕ್ಕಳಿಗೆ ಆನ್ಲೈನ್ ನಲ್ಲಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ “ಯುವ ಸ್ಪೂರ್ತಿ ಮಣಿಪಾಲ” ಮಣಿಪಾಲ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಮುರಳೀಧರ ಪಿ ಭಟ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರುಗಳಾದ ದೇವೇಂದ್ರ ನಾಯಕ್ ಮುತ್ತೂರು, ಅನಿಲ್ ಶೆಟ್ಟಿ, ಇಂದಿನ ಬಹುಮಾನಗಳ ಪ್ರಾಯೋಜಕರಾದ “ಯುವ ಸ್ಪೂರ್ತಿ ಮಣಿಪಾಲ” ದ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯ ಸಾಧು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.








































