ಕೊಡಗು : ಗಡಿ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಹಾಗೂ ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಆ.30ರ ಬೆಳಗ್ಗೆ 6 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ತುರ್ತು, ಅತ್ಯವಶ್ಯಕ, ವೈದ್ಯಕೀಯ ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ.
ವಾರಾಂತ್ಯದ ಕರ್ಫ್ಯೂ ವೇಳೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿಗಳು, ವ್ಯಾಪಾರಿ ಮಳಿಗೆಗಳು ಕಾರ್ಯಾಚರಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.

ಕೇರಳ ರಾಜ್ಯದಿಂದ ಆಗಮಿಸುವವರು ಕೋವಿಡ್ ಲಸಿಕೆ ಪಡೆದಿದ್ದರೂ (2 ಡೋಸ್ ಆಗಿದ್ದರೂ) ಕಡ್ಡಾಯವಾಗಿ 72 ಗಂಟೆಗಳ ಒಳಗಾಗಿ ಪಡೆದಿರುವ ಆರ್‌ಟಿ- ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಸೂಚಿಸಿದ್ದಾರೆ.