ಕಾಪು : ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಬೀಡು ಬಳಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66 ಪಡುಬಿದ್ರಿ ಬೀಡು ಬಳಿಯಲ್ಲಿ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರಿಗೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಪಡುಬಿದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement. Scroll to continue reading.