ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಠಾಣಾ ವ್ಯಾಪ್ತಿಯ ಆಗುಂಬೆ ಘಾಟಿಯ ಏಳನೇ ಸುತ್ತಿನಲ್ಲಿ ಸೋಮವಾರ ಮಧ್ಯಾಹ್ನ ಕಂಟೈನರ್ ಲಾರಿಯೊಂದು ಬ್ರೇಕ್ ಫೇಲಾಗಿ ರಸ್ತೆಯ ತಡೆಗೋಡೆಗೆ ನುಗ್ಗಿದ ಘಟನೆ ನಡೆದಿದ್ದು, ಇಂದು ಎರಡು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ Dmart ಗೆ ಸರಕುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಲಾರಿಯ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಘಾಟಿಯ ಏಳನೇ ತಿರುವಿನಲ್ಲಿ ರಸ್ತೆಯ ತಡೆಗೋಡೆಗೆ ಗುದ್ದಿದೆ. ಲಾರಿಯಲ್ಲಿ ಚಾಲಕನು ಒಬ್ಬನೇ ಇದ್ದನೆಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಇದೇ ತಿರುವಿನ ಪಕ್ಕದಲ್ಲಿ ಲಾರಿಯೊಂದು ರಸ್ತೆ ತಡೆಗೋಡೆಗೆ ಗುದ್ದಿದ ಘಟನೆ ನಡೆದಿತ್ತು. ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸ್ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದರು. ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಲಾಯಿತು.

Advertisement. Scroll to continue reading.
