Connect with us

Hi, what are you looking for?

Diksoochi News

ರಾಜ್ಯ

ಸಿಎಂ ಬೊಮ್ಮಾಯಿ ಸಂಧಾನ ಸಫಲ!; ಕೊಟ್ಟಿರುವ ಖಾತೆಯನ್ನು ನಿಭಾಯಿಸುತ್ತೇನೆ ಎಂದ ಆನಂದ್ ಸಿಂಗ್

0

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದು, ದೆಹಲಿ ಭೇಟಿ ಬಳಿಕ ಎಲ್ಲವನ್ನೂ ಸರಿ ಮಾಡುವ ಭರವಸೆ ನೀಡಿದ್ದಾರೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್, ಮೊದಲು ಕೊಟ್ಟಿರುವ ಖಾತೆಯನ್ನು ನಿಭಾಯಿಸಿ ಎಂದು ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹೀಗಾಗಿ ಅವರ ಆದೇಶದಂತೆ ನಾನು ಇಂದು ಕೆಲಸಕ್ಕೆ ಬಂದಿದ್ದೇನೆ. ನನ್ನ ಖಾತೆಯನ್ನು ನಿಭಾಯಿಸುತ್ತೇನೆ. ಈ ಹಿಂದೆ ಸಲ್ಲಿಸಿದ್ದ ಮನವಿಯನ್ನು ಸಲ್ಲಿಸಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಪರಿಗಣಿಸುವುದಾಗಿ ಹೇಳಿದ್ದಾರೆ. ವರಿಷ್ಠರ ಗಮನಕ್ಕೆ ತಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!