ಅಮೆರಿಕದ ಮಹಿಳಾ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅವರು ಗಾಯದ ಸಮಸ್ಯೆಯಿಂದಾಗಿ ಯುಎಸ್ ಓಪನ್ ನಿಂದ ಹಿಂದೆ ಸರಿದಿದ್ದಾರೆ. ಆಗಸ್ಟ್ 30 ರಿಂದ ಈ ಪಂದ್ಯಾವಳಿ ಆರಂಭವಾಗಲಿದ್ದು, ಅನೇಕ ಪ್ರಮುಖ ಆಟಗಾರರು ಹಿಂದೆ ಸರಿದಿದ್ದಾರೆ.
ಯುಎಸ್ ಓಪನ್ ಪ್ರಶಸ್ತಿಯನ್ನು 6 ಬಾರಿ ಚಾಂಪಿಯನ್ ಆಗಿರುವ ಸೆರೆನಾ ವಿಲಿಯಮ್ಸ್ ಸಾಮಾಜಿಕ ಮಾಧ್ಯಮಗಳ ಮೂಲಕ ಯುಎಸ್ ಪಂದ್ಯಾವಳಿಯಿಂದ ಹಿಂದೆ ಸರಿಯುವ ಮಾಹಿತಿ ನೀಡಿದ್ದಾರೆ.
‘ವೈದ್ಯರು ಮತ್ತು ವೈದ್ಯಕೀಯ ತಂಡದ ಎಚ್ಚರಿಕೆ ಮತ್ತು ಸಲಹೆಯನ್ನ ಪರಿಗಣಿಸಿ ಮತ್ತು ಸಮಾಲೋಚಿಸಿದ ನಂತರ, ನಾನು ಯುಎಸ್ ಓಪನ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಇದರಿಂದ ನನ್ನ ದೇಹವು ಸಂಪೂರ್ಣವಾಗಿ ಚೇತರಿಸಿಕೊಳ್ಳಬಹುದು.’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Advertisement. Scroll to continue reading.

ಇನ್ನು ಪುರುಷರ ವಿಭಾಗದಲ್ಲಿ ರೋಜರ್ ಫೆಡರರ್, ರಾಫೆಲ್ ನಡಾಲ್ ಮತ್ತು ಡೊಮಿನಿಕ್ ಥೀಮ್ ಕೂಡ ಹೊರ ನಡೆದಿದ್ದಾರೆ.