ಮೈಸೂರು : ಮೈಸೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ತಮಿಳನಾಡು ಮೂಲದವರು ಎಂದು ತಿಳಿದು ಬಂದಿದೆ.
ಆಗಸ್ಟ್ 24 ರಂದು ಮೈಸೂರಿನ ಹೊರವಲಯದ ಲಲಿತಾದ್ರಿ ಪುರ ಸಮೀಪ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 85 ಗಂಟೆಯ ಬಳಿಕ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಅತ್ಯಾಚಾರ ನಡೆದ ಜಾಗದಲ್ಲಿ ತಾಳವಾಡಿ ಟಿಕೆಟ್ ಪತ್ತೆಯಾಗಿತ್ತು. ಆ ಜಾಡು ಹಿಡಿದು ಆರೋಪಗಳನ್ನು ಪತ್ತೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.