ನವದೆಹಲಿ : ಭಾರತದಿಂದ ಹೊರಡುವ ಮತ್ತು ಆಗಮಿಸುವಂತ ಅಂತಾರಾಷ್ಟ್ರೀಯ ನಿಗದಿತ ವಾಣಿಜ್ಯ ಪ್ರಯಾಣಿಕರ ವಿಮಾನಗಳ ಮೇಲಿನ ಅಮಾನತನ್ನು ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್ 23 ರಿಂದ ಭಾರತದಿಂದ ಹೊರಡುವ ಮತ್ತು ಆಗಮಿಸುವಂತ ಎಲ್ಲಾ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಷೇಧಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿರ್ಬಂಧಗಳು ಆಗಸ್ಟ್ 31, 2021ರಂದು ಕೊನೆಗೊಳ್ಳಬೇಕಿತ್ತು. ಆದಾಗ್ಯೂ, ಮೂರನೇ ಅಲೆಯ ಕಳವಳಗಳ ನಡುವೆ ಅಮಾನತು ಮತ್ತಷ್ಟು ವಿಸ್ತರಿಸಲಾಗಿದೆ.