ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ವರ್ಗಾವಣೆಗೊಂಡಿದ್ದು, ಕೂರ್ಮ ರಾವ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜಿ.ಜಗದೀಶ್ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿದ್ದಾರೆ. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರು ಜಿಲ್ಲೆಗೆ ನೂತನ ಸಾರಥಿ.