ಮೈಸೂರು : ಮೈಸೂರು ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಡರಾತ್ರಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳ ಸಂಖ್ಯೆ 6 ಕ್ಕೆ ಏರಿಕೆ ಆಗಿದೆ.
ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಸಮೀಪ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement. Scroll to continue reading.



































