Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಸೀತಾನದಿಯಲ್ಲಿ ರಸ್ತೆ ಮೇಲೆ ಬಿದ್ದ ಮರ; ಕೆಲಕಾಲ ಸಂಚಾರ ಸ್ಥಗಿತ

0

ಹೆಬ್ರಿ : ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169A. ಸೀತಾನದಿ ದುಡ್ಡಿನ ಜಡ್ಡು ಮಾರಿಗಡು ಎಂಬಲ್ಲಿ ಮಂಗಳವಾರ ಮುಂಜಾನೆ 5.30 ಸಮಯದಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ನಡೆದಿದೆ. ಕಳೆದ ಹಲವು ದಿನಗಳಿಂದ ಹೆಬ್ರಿ ಪರಿಸರದಲ್ಲಿ ಭಾರೀ ಗಾಳಿ ಮಳೆ ಜೋರಾಗಿದೆ. ಮರ ಬಿದ್ದ ಪರಿಣಾಮ 2 ವಿದ್ಯುತ್ ಕಂಬಗಳು ತುಂಡಾಗಿತ್ತು.


ಸ್ಥಳೀಯರಾದ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಅಡ್ಯಂತಾಯ ಅವರು ಕೂಡಲೇ ಮೆಸ್ಕಾಂ ಅಧಿಕಾರಿಗಳಿಗೆ ಹಾಗೂ ಅರಣ್ಯ ಇಲಾಖೆಗೆ ವಿಷಯ ತಿಳಿಸಿದರು.
ಸ್ಥಳಕ್ಕೆ ಆಗಮಿಸಿದ ಇಲಾಖಾ ಸಿಬ್ಬಂದಿಗಳು ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸಿದರು. ಇದರಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ 3 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು .

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!