Connect with us

Hi, what are you looking for?

Diksoochi News

ರಾಜ್ಯ

ರಾಜ್ಯದಲ್ಲಿ 6 ರಿಂದ 8ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

0

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19ರ ಸೋಂಕಿನ ಪ್ರಮಾಣ 2ಕ್ಕಿಂತ ಕಡಿಮೆ ಇರುವ ತಾಲೂಕು, ವಲಯಗಳಲ್ಲಿ 9 ಮತ್ತು 10ನೇ ತರಗತಿಗಳ ಜೊತೆಗೆ 6 ರಿಂದ 8ನೇ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವುದಕ್ಕೆ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಮಾರ್ಗಸೂಚಿ ಕ್ರಮಗಳು:

  • ದಿನಾಂಕ 16-08-2021ರಂದು ನೀಡಿರುವ ಸೂಚನೆಯಂತೆ 9 ಮತ್ತು 10ನೇ ತರಗತಿಗಳನ್ನು ಶನಿವಾರ ಹೊರತುಪಡಿಸಿ ಮುಂದುವರೆಸುವುದು.
  • ರಾಜ್ಯದಲ್ಲಿನ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲ್ಲೂಕು, ವಲಯಗಳಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳನ್ನು ದಿನಾಂಕ 06-09-2021ರಿಂದ ಪ್ರತಿ ದಿನ ಕೆಳಕಂಡಂತೆ ಸೂಚಿಸಿದ ಅವಧಿಗಳಲ್ಲಿ ಭೌತಿಕ ತರಗತಿಗಳನ್ನು ನಡೆಸಲು ತಿಳಿಸಿದೆ.
  • ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ.
  • ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19ರ ಸೋಂಕಿನ ಯಾವುದೇ ಲಕ್ಷಣಗಳಿಲ್ಲದಿರುವುದಿಲ್ಲವೆಂಬುದನ್ನು ದೃಢೀಕರಿಸಬೇಕು.
  • ಶಾಲೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಮನೆಯಿಂದ ಅಗತ್ಯವಾದ ಕುಡಿಯುವ ನೀರು, ಉಪಹಾರವನ್ನು ತರುವಂತೆ ಸೂಚನೆ ನೀಡುವುದು.
  • ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡುವುದು.
  • ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
  • ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್ ಲೈನ್, ಇತರೆ ಪರ್ಯಾಯ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಕಬೇಕು.
  • ಶನಿವಾರದಂದು 9 ಮತ್ತು 10ನೇ ತರಗತಿಗಳಿಗೆ ಸೇರಿದಂತೆ ಯಾವುದೇ ಮಕ್ಕಳಿಗೆ ಭೌತಿಕ ತರಗತಿಗಳನ್ನು ನಡೆಸಬಾರದು.
  • ಶನಿವಾರದಂದು ಸ್ಥಳೀಯ ಆಡಳಿತದ ಸಹಕಾರದಿಂದ ಶಾಲೆಗಳನ್ನು ಸ್ಯಾನಿಟೈಜ್ ಮಾಡುವ ಕಾರ್ಯವನ್ನು ಕೈಗೊಳ್ಳುವುದು.

ಭೌತಿಕವಾಗಿ ತರಗತಿಗಳನ್ನು ನಡೆಸಲು ಅವಶ್ಯಕ ದೈಹಿಕ ಅಂತರ ಕಾಪಾಡುವ ದೃಷ್ಠಿಯಿಂದ ಶಾಲಾ ಹಂತದಲ್ಲಿ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ 6 ರಿಂದ 8ನೇ ತರಗತಿಗಳ ವಿದ್ಯಾರ್ಥಿಗಳನ್ನು 15 ರಿಂದ 20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿಕೊಂಡು ಭೌತಿಕ ತರಗತಿಗಳನ್ನು ನಡೆಸಲು ತಿಳಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!