ವರದಿ : ದಿನೇಶ್ ರಾಯಪ್ಪನಮಠ
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆಯ ಶಿಕ್ಷಕರಾಗಿ ಹತ್ತೊಂಬತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಕೃಷ್ಣಮೂರ್ತಿ ಮಯ್ಯ ಹಾಗೂ ಅವರ ಪತ್ನಿ ಜ್ಯೋತಿ ಮಯ್ಯ ಅವರನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಗೌರವಿಸಿ ಬಿಳ್ಕೊಡಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಶಾಲ, ಶಾಲೆಯ ಮುಖ್ಯೋಪಾಧ್ಯಾಯ ಗಿರೀಜಾ, ಶಿಕ್ಷಕ ಬಾಲಕೃಷ್ಣ ಶೆಟ್ಟಿ,ನಿವೃತ್ತ ಉಪನ್ಯಾಸಕ ಚಂದ್ರಶೇಖರ್ ಶೆಟ್ಟಿ ಯಾಳಹಕ್ಲು, ನಿವೃತ್ತ ಶಿಕ್ಷಕರಾದ ಶಿವರಾಮ ಸೋಮಯಾಜಿ, ಜಲಜ, ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ ವಡ್ಡರ್ಸೆ, ಸಿಆರ್‍ಪಿ ಚಂದ್ರಶೇಖರ್ ಸಾಯ್ಬ್ರಿಕಟ್ಟೆ, ವಡ್ಡರ್ಸೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಆನಂದ್ ಶೆಟ್ಟಿ, ಶಾಲಾ ಶಿಕ್ಷಕ ವೃಂದ, ಶಾಲಾ ಹಳೆ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಯಶೋಧ ನಿರೂಪಿಸಿ, ವಂದಿಸಿದರು.
Advertisement. Scroll to continue reading.
