ವರದಿ : ದಿನೇಶ್ ರಾಯಪ್ಪನಮಠ
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳು ಇಂದಿನಿಂದ ಆಧಾರ್ ಕಾರ್ಡ್ ಹಾಗೂ ಕೇರಳ ರಾಜ್ಯದ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಕೋವಿಡ್ 19 ಹಿನ್ನಲೆಯಲ್ಲಿ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದರ ಅನ್ವಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸೆ.4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದ ವರೆಗೆ ದೇವಸ್ಥಾನದ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು, ಮೊಬೈಲ್ ಸಂಖ್ಯೆಯನ್ನು ದಾಖಲಿಸಲು ಹಾಗೂ ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಆದೇಶಿಸಿದ್ದಾರೆ.
Advertisement. Scroll to continue reading.
