ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಗುಂಬೆ ಘಾಟಿಯ ಮೂರನೇ ತಿರುವಿನಲ್ಲಿ ಶನಿವಾರ ಬೆಳಿಗ್ಗೆ ಸುಮಾರು ಹನ್ನೊಂದು ಗಂಟೆಗೆ ಬೃಹತ್ ಮರ ರಸ್ತೆ ಮೇಲೆ ಬಿದ್ದ ಪರಿಣಾಮ ಆಗುಂಬೆ ಹೆಬ್ರಿ ಸಂಚಾರ ಬಂದಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ಕಟಿಂಗ್ ಮಿಷನ್ ಮೂಲಕ ಮರವನ್ನು ತುಂಡರಿಸಿ ತೆರವುಗೊಳಿಸಿದರು. ಇದರಿಂದ ಸುಮಾರು 1ಗಂಟೆಗಳ ಕಾಲ ವಾಹನಗಳ ಸಂಚಾರಕ್ಕೆ ತಡೆ ಉಂಟಾಗಿತ್ತು . ಹೆಬ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Advertisement. Scroll to continue reading.