ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಹುಲ್ಲುಗಾವಲಿನಲ್ಲಿ ಭಾನುವಾರ ಭಾರಿ ಪ್ರಮಾಣದಲ್ಲಿ ಮೇಘಸ್ಫೋಟವಾದ ಪರಿಣಾಮ ‘ಬಕರ್ವಾಲ್’ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ರಫಿಯಾಬಾದ್ ಪ್ರದೇಶದ ಕಫರ್ನಾರ್ ಹುಲ್ಲುಗಾವಲಿನಲ್ಲಿ ಬಕರ್ವಾಲ್ ಕುಟುಂಬದ ಕುಟುಂಬದ ಆರು ಸದಸ್ಯರಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ಜೀವಂತವಾಗಿ ಪತ್ತೆಯಾಗಿದ್ದು, ಇನ್ನೊಬ್ಬರು ಕಾಣೆಯಾಗಿದ್ದಾರೆ. ರಕ್ಷಣಾ ತಂಡವು ಕಾಣೆಯಾದವರ ಪತ್ತೆ ಹಚ್ಚುವಲ್ಲಿ ಕಾರ್ಯ ಪ್ರವೃತ್ತವಾಗಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.