ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರು ಸೋಮವಾರ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಷಿ ಸೇರಿ ಗೋವಾ ಮತ್ತು ಹರಿಯಾಣ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು. ರಾಜ್ಯ ಚುನಾವಣೆಗೆ ಒಂದು ವರ್ಷ ಮೊದಲು ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ನೂತನ ಸಿಎಂ ಅಗಿ ಭೂಪೇಂದ್ರ ಪಟೇಲ್ ಆಯ್ಕೆ ಆಗಿದ್ದಾರೆ.
Advertisement. Scroll to continue reading.