ಬೆಂಗಳೂರು : ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
15 ರಷ್ಟು ರಿಯಾಯಿತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಹೈಕೋರ್ಟ್ ಕೂಡಾ ಮಹತ್ವದ ತೀರ್ಪು ನೀಡಿದೆ.
ರಾಜ್ಯ ಸರ್ಕಾರವು ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 70 ರಷ್ಟು ಶುಲ್ಕ ಸ್ವೀಕರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ರದ್ದು ಪಡಿಸಿದೆ. ಇದೀಗ ಬೋಧನಾ ಶುಲ್ಕದಲ್ಲಿ 15 ರಷ್ಟು ರಿಯಾಯಿತಿ ಕೊಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
Advertisement. Scroll to continue reading.
ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದೆ.