ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಇಂದು ತರಬೇತಿ ಸಮಯದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಿಲ್ಲೆಯ ಶಿವಗಢ ಧಾರ್ ಪ್ರದೇಶದಲ್ಲಿ ಅಪಘಾತಕ್ಕೆ ಒಳಗಾಗಿದೆ’ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಬೆಳಿಗ್ಗೆ 10.30 ರಿಂದ 10.45ರ ನಡುವೆ ಈ ಘಟನೆ ಸಂಭವಿಸಿದೆ. ಚಾಪರ್ ಸೇನಾ ವಾಯುಯಾನ ಪಡೆಗೆ ಸೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement. Scroll to continue reading.