ಬೆಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ, ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇಂದು ಗಲ್ಲು ಶಿಕ್ಷೆಯನ್ನು ಬದಲಿಸಿ ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸೋ ಕುರಿತಂತೆ ವಿಕೃತಕಾಮಿ ಉಮೇಶ್ ರೆಡ್ಡಿ ಸಲ್ಲಿಸಿದ್ದಂತ ಅರ್ಜಿಯನ್ನು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿದ್ದು, ಕ್ಷಮಾಧಾನ ಅರ್ಜಿಯನ್ನು ರಾಷ್ಟ್ರಪತಿಗಳು ವಿಳಂಬ ಮಾಡಿಲ್ಲ ಎಂಬುದಾಗಿ ಅಭಿಪ್ರಾಯಪಟ್ಟಿದೆ ಹಾಗೂ ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ಆದ್ರೇ ಗಲ್ಲು ಶಿಕ್ಷೆ ಖಾಯಂಗೊಂಡ ಹಿನ್ನಲೆಯಲ್ಲಿ 6 ವಾರಗಳವರೆಗೆ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸೋದಕ್ಕೆ ವಿನಾಯ್ತಿ ಕೂಡ ನೀಡಿ ಆದೇಶಿಸಿದ್ದಾರೆ.
ಅಂದಹಾಗೇ ವಿಕೃತಕಾಮಿ ಉಮೇಶ್ ರೆಡ್ಡಿ ಈ ಹಿಂದೆ ಗಲ್ಲು ಶಿಕ್ಷೆಗೆ ಕ್ಷಮಾಧಾನಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದ. ಆದರೆ, ರಾಷ್ಟ್ರಪತಿಗಳು ಅವರ ಕ್ಷಮಾಧಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಈ ಬಳಿಕ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸುವಂತೆ ಕೋರಿದ್ದ, ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.



































