ಐಪಿಎಲ್ 2021 : ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್ ಸಿ ಬಿ 7 ವಿಕೆಟ್ ಗಳ ಜಯ ಸಾಧಿಸಿದೆ. 20 ಓವರ್ ಗಳಲ್ಲಿ 9 ವಿಕೆಟ್ ಕಳಕೊಂಡ ರಾಜಸ್ಥಾನ 149 ರನ್ ಕಲೆ ಹಾಕಿತು. ಗುರಿ ಬೆನ್ನತ್ತಿದ ಆರ್ ಸಿ ಬಿ 17.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಪಂದ್ಯ ಗೆದ್ದಿತು.
ಹರ್ಷಲ್ ಪಟೇಲ್, ಯುಜವೇಂದ್ರ ಚಹಲ್ ಬೌಲಿಂಗ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್, ಕೆಎಸ್ ಭರತ್ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ನಗೆ ಬೀರಲು ಸಹಕಾರಿಯಾಯಿತು. ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ 48 ರನ್ ಜೊತೆಯಾಟ ನೀಡಿದರು. ಕೆಎಸ್ ಭರತ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ 3ನೇ ವಿಕೆಟ್ ಗೆ 69 ರನ್ ಜೊತೆಯಾಟ ನೀಡಿದರು.
Advertisement. Scroll to continue reading.

In this article:Diksoochi news, diksoochi Tv, diksoochi udupi, IPL 2021, rajastan royals, RCB
Click to comment

































