ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬ್ರಹ್ಮಾವರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ
ಶ್ರೀಶಾರದಾ ಜ್ಞಾನ ವಿಕಾಸ ಕೇಂದ್ರದಲ್ಲಿ
ಜಾತಬೆಟ್ಟು ಶಾಲೆಯಲ್ಲಿ ಚಲನಚಿತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉಪ್ಪೂರು ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ರಾಜು ಪೂಜಾರಿ ಉದ್ಘಾಟಿಸಿ ಶುಭಹಾರೈಸಿದರು.
ಉಪ್ಪೂರು ಗ್ರಾಮಪಂಚಾಯತ್ ಅಧ್ಯಕ್ಷ ಕೃಷ್ಣರಾಜ್ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಶಿಸ್ತು ವ್ಯವಹಾರ ಜ್ಞಾನ ಬೆಳೆದಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶೋಭಾ ವಹಿಸಿದ್ದರು. ಸದಸ್ಯರಿಗೆ ಆರ್ಥಿಕ ಶಿಸ್ತು, ಸ್ವಸಹಾಯ ಸಂಘದ ಕಾರ್ಯಕ್ರಮ ಮತ್ತು ಮಹತ್ವದ ಬಗ್ಗೆ ತಿಳಿಸುವ ಕಾನೂರಾಯಣ ಚಲನಚಿತ್ರವನ್ನು ಈ ಸಂದರ್ಭ ತೋರಿಸಲಾಯಿತು.


ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಂಯೋಜಕಿ ಅಂಬುಜಾಕ್ಷಿ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಶ್ರೀಯುತ ಯೋಗೀಶ್, ಜನಜಾಗೃತಿ ಸದಸ್ಯ ಪ್ರವೀಣ್ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಬಾಬಿಯವರು ಸ್ವಾಗತಿಸಿ, ಮಂಜುಳಾರವರು ವಂದಿಸಿದರು. ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ನೇತ್ರಾವತಿ ನಿರೂಪಿಸಿದರು.

































