ನಟ ನಾಗ ಚೈತನ್ಯ ಹಾಗೂ ಸಮಂತಾ ದಾಂಪತ್ಯದ ಕುರಿತಾದ ಗಾಸಿಪ್ ಗೆ ಕೊನೆಗೂ ತೆರೆ ಬಿದ್ದಿದೆ. ಇಬ್ಬರೂ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿರಿಸಿ ನಾಲ್ಕು ವರ್ಷಗಳಾಗಿತ್ತು. ಇವರಿಬ್ಬರೂ ಬೇರೆ ಬೇರೆ ಆಗಿದ್ದಾರೆ ಎಂಬ ಗಾಸಿಪ್ ಕೂಡ ಹರಿದಾಡುತ್ತಿತ್ತು.
ಇಬ್ಬರೂ ಒಂದೇ ಪೋಸ್ಟ್ ಶೇರ್ ಮಾಡುವ ಮೂಲಕ ವಿಚ್ಛೇದನ ಸುದ್ದಿ ಅಧಿಕೃತ ಪಡಿಸಿದ್ದಾರೆ. “ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಿ ಅಂತ ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮ್ಮ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ ಅಂತ ಕೇಳಿಕೊಳ್ಳುತ್ತೇವೆ” ಎಂದು ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂದಹಾಗೆ ಸಮಂತಾ ಮತ್ತು ನಾಗ ಚೈತನ್ಯ ಇಬ್ಬರು 2017ರ ಅಕ್ಟೋಬರ್ 6 ರಂದು ಹಿಂದೂ ಸಂಪ್ರದಾಯದ ಪ್ರಕಾರ ಅದ್ದೂರಿಯಾಗಿ ಮದುವೆಯಾಗಿದ್ದರು. ಅಕ್ಟೋಬರ್ 7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿಸಲಾಗಿತ್ತು.

