ವರದಿ : ದಿನೇಶ್ ರಾಯಪ್ಪನಮಠ
ಗಂಗೊಳ್ಳಿ : ಸತ್ಯ ಮತ್ತು ಅಹಿಂಸೆಗಳ ದಾರಿಯಲ್ಲಿ ನಡೆದು ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಕನಸು ನನಸು ಮಾಡುವ ಸಂಕಲ್ಪ ಮಾಡಬೇಕು. ಧೀಮಂತ ವ್ಯಕ್ತಿತ್ವದ ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸದಾ ಸ್ಮರಿಸಿಕೊಳ್ಳಬೇಕು. ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳನ್ನು ಸಲ್ಲಿಸೋಣ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀನಿವಾಸ ಖಾರ್ವಿ ಹೇಳಿದರು.
ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಗಂಗೊಳ್ಳಿ ಗ್ರಾಮ ಪಂಚಾಯತ್ನಲ್ಲಿ ಶನಿವಾರ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ನಾಗರಾಜ ಖಾರ್ವಿ, ಬಿ.ರಾಘವೇಂದ್ರ ಪೈ, ಶಾಂತಿ ಅಶೋಕ್, ಮಂತಿ ಶ್ರೀನಿವಾಸ ಖಾರ್ವಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಮಾಶಂಕರ, ಗ್ರಾಪಂ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್, ಶೇಖರ ಜಿ, ಉದಯಕುಮಾರ್, ಸಂದೀಪ್ ಖಾರ್ವಿ, ಭಾಗ್ಯ, ಹರೀಶ್, ಅಂಗನವಾಡಿ ಕಾರ್ಯಕರ್ತೆಯರು, ಮತ್ತಿತರರು ಉಪಸ್ಥಿತರಿದ್ದರು.



































