ಉಡುಪಿ : ಕುಕ್ಕೆಹಳ್ಳಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ , ಕ್ಷಯ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿ , ಗ್ರಾಮ ಪಂಚಾಯತ್ ಕುಕ್ಕೆಹಳ್ಳಿ ಇವರ ಅಭಿರಕ್ಷೆಯಲ್ಲಿ ಕ್ಷಯ ಮುಕ್ತ ಗ್ರಾಮ ಕ್ಕಾಗಿ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುರಂದರ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಪಿಡಿಓ ರಾಜೇಶ್ವರಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು ಡಾ. ಚಿದಾನಂದ ಸಂಜು ಎಸ್.ವಿ. ಮೊದಲಾದವರು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರದ ವೈದ್ಯಾಧಿಕಾರಿ ಡಾಕ್ಟರ್ ಅರ್ಚನಾ ಹೆಗ್ಡೆ ಪ್ರಸ್ತಾವಿಕವಾಗಿ ಮಾತನಾಡಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಶಿವಕುಮಾರ್ ವಂದಿಸಿದರು.
Advertisement. Scroll to continue reading.



































