ಬೆಂಗಳೂರು : ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.
ಇನ್ನು ರಾಜ್ಯದ ಇತರೆ ಜಿಲ್ಲೆಗಳಲ್ಲಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್ ಲೈನ್ ಬಿಡುಗಡೆ ಮಾಡಿದ್ದು, ಸರಳವಾಗಿ ದಸರಾ ಅಚರಣೆಗೆ ಸರ್ಕಾರ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ 400 ಕ್ಕೂ ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಹಾಗೂ ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ರಾಜ್ಯ ಸರ್ಕಾರ ಗೈಡ್ ಲೈನ್ ನಲ್ಲಿ ತಿಳಿಸಿದೆ.
ದಸರಾ ಆಚರಣೆಗೆ ರಾಜ್ಯ ಸರ್ಕಾರದ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಮುಖ್ಯಾಂಶಗಳು :

೧.ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ
೨.ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆಗೆ ಅವಕಾಶ
೩. 8 ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ
೪.ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 100 ಜನರಿಗೆ ಅನುಮತಿ

೫. ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಅವಕಾಶ
೬.ಜನರು ಮಾಸ್ಕ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯ
೭. ಪೊಲೀಸ್, ಆರೋಗ್ಯ ಇಲಾಖೆ ಸೂಚನೆ ಕಡ್ಡಾಯ ಪಾಲನೆ
