ಬೆಂಗಳೂರು : ಅಕ್ಟೋಬರ್ 20 ರ ವರೆಗೆ ಶಾಲೆಗಳಿಗೆ ದಸರಾ ರಜೆಯಿದ್ದು, ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತಂತೆ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ 27, 29 ರಂದು 352 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಗೆ 53,155 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ.55.54 ಫಲಿತಾಂಶ ಬಂದಿದೆ ಎಂದು ತಿಳಿಸಿದರು.
Advertisement. Scroll to continue reading.