ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಯಡಮಕ್ಕಿ ಕ್ರಾಸ್ ಬಳಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದಾಗ ಶಂಕರನಾರಾಯಣ ಪೋಲಿಸರು ಕಾರ್ಯಾಚರಣೆ ನಡೆಸಿ ಐದು ಗಂಡು ಕರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ನಾಗರಾಜ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. ಆರೋಪಿ ನಾಗರಾಜನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಹೊಂದದೇ 5 ಜಾನುವಾರುಗಳನ್ನು ಕಳವು ಮಾಡಿಕೊಂಡು ಹಿಂಸಾತ್ಮಕವಾಗಿ ಪಿಕಪ್ ವಾಹನದಲ್ಲಿ ತುಂಬಿಸಿ ವಧೆ ಮಾಡಲು ಕುಂದಾಪುರ ತಾಲೂಕಿನ ಶಂಕರನಾರಾಯಣ ಯಡಮಕ್ಕಿ ಕ್ರಾಸ್ ಬಳಿ ಸಾಗಾಟ ಮಾಡುತ್ತಿದ್ದಾಗ ಶಂಕರನಾರಾಯಣ ಪಿಎಸ್ಐ ಶ್ರೀಧರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.


In this article:cow shipping, Diksoochi news, diksoochi Tv, diksoochi udupi, Kundapura

Click to comment