ಕಲಬುರಗಿ : ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ದೀಕ್ಷಾ ಶರ್ಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವರು. ಪತಿಯ ಅಕ್ರಮ ಸಂಬಂಧ ಹಾಗೂ ಅತ್ತೆಯ ಕಿರುಕುಳದಿಂದ ದೀಕ್ಷಾ ಶರ್ಮಾ ತನ್ನ ಇಬ್ಬರು ಮಕ್ಕಳಾದ ಸಿಂಚನಾ ಹಾಗೂ ಧನಂಜಯ್ ರನ್ನು ಹಗ್ಗ ಬಳಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾರೆ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯ ಪುತ್ರ ಧನಂಜಯ್ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ಈ ಬಗ್ಗೆ ಕಲಬುರಗಿ ಸ್ಟೇಷನ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement. Scroll to continue reading.