ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಸಿಡಿಲು ಗುಡುಗಿನ ಮಳೆಯಾಗುತ್ತಿದ್ದು, ಭಾರೀ ಪ್ರಮಾಣದಲ್ಲಿ ಮನೆಗಳಿಗೆ ಹಾಗೂ ಕೃಷಿಗಳಿಗೆ ಹಾನಿಯಾಗಿದೆ. ಸೋಮವಾರ ತಡರಾತ್ರಿ ಕುಚ್ಚೂರಿನ ಕಾನ್ಬೆಟ್ಟಿನ ಹುಣಸೆ ಗುಡ್ಡೆ ನಿವಾಸಿ ಮಂಜುನಾಥ ಆಚಾರ್ ಅವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮ ಕೊಟ್ಟಿಗೆಯಲ್ಲಿದ್ದ ಎತ್ತು ಮೃತಪಟ್ಟಿದೆ ಹಾಗೂ ಮನೆಯ ವಿದ್ಯುತ್ ಸಂಪರ್ಕ ಸಂಪೂರ್ಣ ಹಾನಿಯಾಗಿದ್ದು, ಬಹಳಷ್ಟು ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಕುಚ್ಚೂರು ಗ್ರಾಂಪಂ ಸದಸ್ಯ ಮಹೇಶ್ ಶೆಟ್ಟಿ, ಜೆಡಿಎಸ್ ಮುಖಂಡ ಕುಚ್ಚೂರು ಶ್ರೀಕಾಂತ ಪೂಜಾರಿ ಮತ್ತಿತರರು ಭೇಟಿ ನೀಡಿ ಸರಕಾರದಿಂದ ಪರಿಹಾರ ಸಿಗುವಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ .

Advertisement. Scroll to continue reading.



































