Connect with us

Hi, what are you looking for?

Diksoochi News

ಕರಾವಳಿ

ಹಿರಿಯಡಕ: ಕ್ಲೀನ್ ಇಂಡಿಯಾ ಆಂದೋಲನದಡಿ ಪರಿಸರ ಜಾಗೃತಿ ಮೂಡಿಸಿ : ಡಾ. ನವೀನ್ ಭಟ್

0

ಹಿರಿಯಡಕ: ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಅಭ್ಯಾಸವನ್ನು ನಾವೆಲ್ಲರು ಮರೆಯದೆ ಮೈಗೂಡಿಸಿಕೊಳ್ಳುವುದರ ಜೊತೆಗೆ ಪರಿಸರ ಜಾಗೃತಿಯ ಕುರಿತು ಇತರರಿಗೂ ಮಾದರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಹೇಳಿದರು.
ಅವರು ಕ್ಲೀನ್ ಇಂಡಿಯಾ ಪ್ರಯುಕ್ತ ಕೊಡಿಬೆಟ್ಟು ಗ್ರಾಮ ಪಂಚಾಯತ್ ವಠಾರದಲ್ಲಿ ಇತ್ತೀಚೆಗೆ ನಡೆದ 9 ಕಿಮೀ ಸ್ವಚ್ಛತಾ ಜಾಥಾ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ಲಾಸ್ಟಿಕ್ ಕಸ ಹೆಕ್ಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.


ಸ್ವಚ್ಛತೆಯನ್ನು ಕಾಪಾಡುವ ಸಲುವಾಗಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಘನ, ದ್ರವ ತ್ಯಾಜ್ಯಗಳ ವಿಲೇವಾರಿಯಲ್ಲಿ ಸಾರ್ವಜನಿಕರ ಪಾತ್ರ ಕೂಡ ಬಹುಮುಖ್ಯವಾಗಿದೆ ಎಂದ ಅವರು ತಮ್ಮ ತಮ್ಮ ಮನೆಯವರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮಕ್ಕಳು ನಾಂದಿ ಹಾಡಿದರೆ ಕ್ಲೀನ್ ಇಂಡಿಯಾ ಪರಿಕಲ್ಪನೆ ಸಾಕಾರಗೊಳ್ಳುವುದು ಎಂದರು.


ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಮೊದಲ ಆದ್ಯತೆ ನೀಡಬೇಕು. ಇದಕ್ಕೆ ಸರಕಾರ ಹೊಣೆ ಎಂದು ಸುಮ್ಮನೆ ಕೂತರೆ ಪ್ರಯೋಜನವಿಲ್ಲ, ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕ್ಲೀನ್ ಇಂಡಿಯಾ ಪರಿಕಲ್ಪನೆ ಸಾಕಾರಗೊಳಿಸಲು ಕ್ರಿಯಾಶೀಲ ಪ್ರಯತ್ನಗಳನ್ನು ಮಾಡಬೇಕು ಎಂದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್‍ನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವೀಂದ್ರ ಬೋರ್ಕರ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ, ಪಂಚಾಯತ್ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸದಾನಂದ ಪ್ರಭು ಸ್ವಾಗತಿಸಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಡಿ ಶೆಟ್ಟಿ ವಂದಿಸಿ, ಉದಯ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!