ವರದಿ : ದಿನೇಶ್ ರಾಯಪ್ಪನಮಠ
ಕೋಟ: ಕೋಟ ಗ್ರಾಮಪಂಚಾಯತ್ ನ ಪ್ರಥಮ ಕೆ.ಡಿ.ಪಿ ಸಭೆ ಗುರುವಾರ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿತು. ಸಭೆಯಲ್ಲಿ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಶೇಕಡಾ 100 ವ್ಯಾಕ್ಸಿನೇಷನ್ಗೊಳಿಸುವ ನಿಟ್ಟಿನ ಅಂಗನವಾಡಿ ಕಾರ್ಯಕರ್ತರಲ್ಲಿ ಮಾಹಿತಿ ಪಡೆಯಲಾಯಿತು.
ಹಾಗೂ ಅಂಗನವಾಡಿ ಕಾರ್ಯಕರ್ತ ಸಮ್ಮುಖದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ,ಮನೆಗಳ ಕಸ ಕಲೆಹಾಕಲಾಗುತ್ತಿದ್ದು ಅದರ ಬಗ್ಗೆ ಮಾಹಿತಿ ನೀಡಲು ಸೂಚಿಸಲಾಯಿತು.
28 ಇಲಾಖೆಗಳ ಪೈಕಿ ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ, ಮೀನುಗಾರಿಕಾ ಇಲಾಖೆ ಹೊರತುಪಡಿಸಿ ಇನ್ನುಳಿದ ಇಲಾಖೆಗಳ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ನ್ಯಾಯಸಮಿತಿ ಅಧ್ಯಕ್ಷ ಶೇಖರ್ ಜಿ,ಕಾರ್ಯದರ್ಶಿ ಮಂಜು, ಉಪಾಧ್ಯಕ್ಷೆ ಜಯಂತಿ ಪೂಜಾರಿ ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಸಭೆಯನ್ನು ನಿರ್ವಹಿಸಿದರು.
Advertisement. Scroll to continue reading.

In this article:

Click to comment