ಪಟ್ಲ : ರಥಬೀದಿ ಗೆಳೆಯರು ಉಡುಪಿ ಹಾಗೂ ಯು.ಎಸ್.ನಾಯಕ್ ಪ್ರೌಢಶಾಲೆ ಪಟ್ಲ ಇವರ ಜಂಟಿ ಆಶ್ರಯದಲ್ಲಿ ಕನ್ನಡ ಗೀತೆಗಳ ಸಮೂಹ ಗಾಯನ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಪಟ್ಲ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ನಡೆಯಿತು. ಸಂಸ್ಥೆಯ ಮುಖ್ಯ ಶಿಕ್ಷಕರು ಈ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಕನ್ನಡ ಅಧ್ಯಾಪಕ ಶಾಂತಪ್ಪ ಮೂಲಂಗಿ ಹಾಗೂ ಎಚ್.ಎನ್.ನಟರಾಜ್ ಕನ್ನಡ ನಾಡು ನುಡಿ ಸಂಸ್ಕೃತಿಯ ಕುರಿತಾದ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿಕೊಟ್ಟರು.