ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ; ನಾಲ್ವರ ದುರ್ಮರಣ; ಐದು ಜನರಿಗೆ ಗಂಭೀರ ಗಾಯ
Published
0
ಹೆಬ್ರಿ : ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ರಸ್ತೆ ತಡೆಗೋಡೆಗೆ ಬಡಿದು, ಸುಮಾರು ನೂರು ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಲಾರಿಯಲ್ಲಿ ಚಾಲಕ ಸಹಿತ ಒಟ್ಟು 9 ಜನ ಇದ್ದರೆಂದು ತಿಳಿದುಬಂದಿದೆ . ಅದರಲ್ಲಿ 4 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಐವರಿಗೆ ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹೆಬ್ರಿ ಪೊಲೀಸರು ಆಗಮಿಸಿದ್ದು , ಅಗ್ನಿಶಾಮಕ ದಳದ ಅವರೊಂದಿಗೆ ಮೃತದೇಹಗಳನ್ನು ಮೇಲೆತ್ತಲು ಹರಸಾಹಸ ಪಡುತ್ತಿದ್ದಾರೆ .ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.