ವರದಿ : ದಿನೇಶ್ ರಾಯಪ್ಪನಮಠ
ಕೋಟ: ತಾನು ಲಂಚ ಸ್ವೀಕರಿಸದೆ, ಇನ್ನೊಬ್ಬರಿಗೆ ಲಂಚ ಕೊಡದೆ ಇದ್ದಲ್ಲಿ, ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಉಡುಪಿ ಜಿಲ್ಲಾ ಲೋಕಾಯುಕ್ತ ಇನ್ಸ್ಪೆಕ್ಟರ್ ಜಯರಾಂ ಗೌಡ ಇವರು ಕೋಟದ ವಿವೇಕ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಭೃಷ್ಟಾಚಾರವನ್ನು ಕಂಡಾಗ ಸುಮ್ಮನಿರಬಾರದು, ತಪ್ಪನ್ನು ಖಂಡಿಸಬೇಕು. ಲಂಚಗುಳಿತನ ಕಂಡಾಗ, ಲೋಕಾಯುಕ್ತ ಇಲಾಖೆಗೆ ತಿಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಯಿತ್ತರು. ನಂತರ ಭೃಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಹಕರಿಸಬೇಕು ಎಂಬ ಪ್ರತಿಜ್ಞಾವಿಧಿಯನ್ನು ಭೋದಿಸಿದರು.
ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಜಗದೀಶ ನಾವಡ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.
ಕನ್ನಡ ಉಪನ್ಯಾಸಕರಾದ ಸದಾಶಿವ ಹೊಳ್ಳ ಧನ್ಯವಾದಗೈದರು. ಇಂಗ್ಲಿಷ್ ಉಪನ್ಯಾಸಕರಾದ ಶಿವಪ್ರಸಾದ ಶೆಟ್ಟಿಗಾರ್ ಅವರು ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಭೃಷ್ಟಾಚಾರ ನಿರ್ಮೂಲನೆಯಲ್ಲಿ ಯುವಜನತೆಯ ಪಾತ್ರ ಎಂಬ ವಿಷಯದ ಬಗ್ಗೆ ಭಾಷಣ ಏರ್ಪಡಿಸಿ, ಬಹುಮಾನಗಳನ್ನು ವಿತರಿಸಿದರು.
ಲೋಕಾಯುಕ್ತ ದಳದ ಎ.ಎಸ್.ಐ. ನಾಗೇಶ್ ಉಡುಪ, ಹೆಡ್ ಕಾನ್ಸ್ಸ್ಟೆಬಲ್ ನಾಗರಾಜ, ರಾಜೇಶ್ ಉಪಸ್ಥಿತರಿದ್ದರು.



































