ಬೆಂಗಳೂರು : ಪುನೀತ್ ರಾಜ್ ಕುಮಾರ್ ಮಗಳು ದೆಹಲಿ ತಲುಪಿದ್ದು, ಬೆಂಗಳೂರಿಗೆ ಆಗಮಿಸಲಿದ್ದಾರೆ. ಇಲ್ಲಿ ಜನಸಂದಣಿ ಹೆಚ್ಚಾಗಿದ್ದು, ಬಹಳಷ್ಟು ಮಂದಿ ಅಂತಿಮ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಹಾಗಾಗಿ ನಾಳೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ನಾಳೆ ಬೆಳಿಗ್ಗೆ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಸಮಾಧಾನದಿಂದ ಬಂದು ಅಭಿಮಾನಿಗಳು ದರ್ಶನ ಪಡೆಯಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.