ಬೆಂಗಳೂರು: ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಕಮಾಂಡೆಂಟ್ ಸೆಂಟರ್ ನಲ್ಲಿ ಡಿಸಿಪಿಯಾಗಿದ್ದಂತ ಇಷಾ ಪಂತ್ ಅವರನ್ನು, ಕಲಬುರ್ಗಿ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿದ್ದಂತ ಡಾ.ಸುಮನ್ ಡಿ ಪೆನ್ನೇಕರ್ ಅವರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿದೆ.
Advertisement. Scroll to continue reading.

ಗದಗ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತಹ ಯತೀಶ್ ಎನ್ ಅವರನ್ನು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಕಲಬುರ್ಗಿ ಎಸ್ಪಿಯಾಗಿದ್ದಂತ ಡಾ.ಸಿಮಿ ಮರಿಯಂ ಜಾರ್ಜ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಡೆಪ್ಯೂಟಿ ಡೈರೆಕ್ಟರ್ ಹುದ್ದೆಗೆ ವರ್ಗಾವಣೆಗೊಳಿಸಿದೆ.
Advertisement. Scroll to continue reading.
