ನವದೆಹಲಿ : ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ನಾಡಿನ ಜನತೆಗೆ ಟ್ವಿಟ್ಟರ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಹಾರೈಸಿದ್ದಾರೆ.
Advertisement. Scroll to continue reading.