ಮಂಗಳೂರು : ಎರಡು ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿ ಉಪ್ಪು ನೀರಿನ ಮೀನಿನ ತೊಟ್ಟಿಗೆ ಮಗುವನ್ನು ಎಸೆದ ಘಟನೆ ಮಂಗಳೂರು ನಗರದ ಹೊಯ್ಗೆ ಬಜಾರ್ ಎಂಬಲ್ಲಿ ನಡೆದಿದೆ.
ಬಿಹಾರ ಮೂಲದ ಚಂದನ್ ಬಂಧಿತ ಆರೋಪಿ.
ಸದ್ಯ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
Advertisement. Scroll to continue reading.
ಬಿಹಾರ ಮೂಲದ ದಂಪತಿಯ ಮಗುವಿನ ಮೇಲೆ ಬಿಹಾರ ಮೂಲದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದ್ದು, ವಿಚಾರಣೆ ವೇಳೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.