ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಒಂದು, ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಶಿರಾಡಿ ಘಾಟಿಯಲ್ಲಿ ನಡೆದಿದೆ. ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡು, ಇತರರಿಗೆ ಸಣ್ಣಪುಟ್ಟಗಾಯಗಳಾಗಿರೋದಾಗಿ ತಿಳಿದು ಬಂದಿದೆ.
ಪುತ್ತೂರು ಸಮೀಪದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿ ಸಮೀಪದ ಶಿರಾಡಿ ಘಾಟ್ ನಲ್ಲಿ, ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಅದರಲ್ಲಿದ್ದಂತಹ ಐವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Advertisement. Scroll to continue reading.



































