ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಕಾಜಾರಗುತ್ತು ಸ.ಹಿ.ಪ್ರಾ.ಶಾಲೆಗೆ ಟಿವಿ ಕೊಡುಗೆ
Published
0
ಹಿರಿಯಡ್ಕ : ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ರಾಜೇಂದ್ರ ಪ್ರಸಾದ್ ಸುರತ್ಕಲ್ ಅವರು ಟಿವಿಯನ್ನು ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ನೀಡಿದರು.
ಈ ಸಂದರ್ಭ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಮುರಳೀಧರ ಉಪಾಧ್ಯ ಹಿರಿಯಡಕ, ಶಾರದಾ ಉಪಾಧ್ಯ, ಶಾಲಾ ಮುಖ್ಯೋಪಾಧ್ಯಾಯ ಸಾಧು, ಶಿಕ್ಷಕಿ ಜಯಲಕ್ಷ್ಮಿ, ಎಸ್ ಡಿ ಎಂ ಸಿ ಅಧ್ಯಕ್ಷ ವಿಷ್ಣುಮೂರ್ತಿ ಶೆವ್ಡೆ ಮೊದಲಾದವರು ಉಪಸ್ಥಿತರಿದ್ದರು.